►68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ
ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, ‘ಸೂರರೈಪೋಟ್ರು’ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ನಟ ಸೂರ್ಯಗೆ ಅತ್ಯುತ್ತಮ ನಟ ಪ್ರಶಸ್ತಿ ಒಲಿದು ಬಂದಿದೆ. ಸೂರ್ಯ ಅವರೊಂದಿಗೆ ‘ತಾನ್ಹಾಜಿ’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅಜಯ್ ದೇವಗನ್ ಅವರು ಶ್ರೇಷ್ಠ ನಟ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ನಟ ಸೂರ್ಯ ಅಭಿನಯದ ಸೂರರೈಪೋಟ್ರು ಚಿತ್ರ ಐದು ವಿಭಾಗಗಳಲ್ಲಿ ಪ್ರಶಸ್ತಿ ಬಾಚಿಕೊಂಡಿದೆ. ಅತ್ಯುತ್ತಮ ಚಲನಚಿತ್ರ, ಉತ್ತಮ ನಟ , ಅತ್ಯುತ್ತಮ ನಟಿ (ಅಪರ್ಣಾ ಬಾಲಮುರಳಿ), ಅತ್ಯುತ್ತಮ ಹಿನ್ನಲೆ ಸಂಗೀತ (ಜಿವಿ ಪ್ರಕಾಶ್ ಕುಮಾರ್), ಅತ್ಯುತ್ತಮ ಚಿತ್ರಕಥೆ (ಶಾಲಿನಿ ಉಷಾ ನಾಯರ್ ಕೊಂಗರ) ವಿಭಾಗಗಳಲ್ಲಿ ಸೂರರೈಪೋಟ್ರು ಚಿತ್ರ ಪ್ರಶಸ್ತಿ ಗೆದ್ದಿದೆ.
68ನೇ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮುಖ ಪಟ್ಟಿ ಇಲ್ಲಿದೆ
ಅತ್ಯುತ್ತಮ ಚಲನ ಚಿತ್ರ: ಸೂರರೈ ಪೋಟ್ರು
ಸಂಪೂರ್ಣ ಮನರಂಜನಾ ಚಿತ್ರ: ತಾನಾಜಿ: ದಿ ಅನ್‌ಸಂಗ್ ವಾರಿಯರ್
ಅತ್ಯುತ್ತಮ ನಟ: ಸೂರ್ಯ( ಸೂರರೈ ಪೋಟ್ರು) ಹಾಗೂ ಅಜಯ್ ದೇವಗನ್(ತಾನಾಜಿ: ದಿ ಅನ್‌ಸಂಗ್ ವಾರಿಯರ್)
ಅತ್ಯುತ್ತಮ ನಟಿ: ಅಪರ್ಣ ಬಾಲಮುರಳಿ ( ಸೂರರೈ ಪೋಟ್ರು)
ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು
ಅತ್ಯುತ್ತಮ ನಿರ್ದೇಶನ: ಸಚ್ಚಿದಾನಂದನ್ ಕೆಆರ್ (ಅಯ್ಯಪ್ಪನುಂ ಕೋಶಿಯುಂ)
ಅತ್ಯುತ್ತಮ ಡೈಲಾಗ್: ಮಂಡೇಲಾ(ತಮಿಳು)
ಅತ್ಯುತ್ತಮ ಪರಿಸರ ಸಂರಕ್ಷಣಾ ಸಿನಿಮಾ: ತಲೆದಂಡ (ಕನ್ನಡ)
ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
ಅತ್ಯುತ್ತಮ ಆತ್ಮಚರಿತ್ರೆ: ನಾದದ ನವನೀತ (ಗಿರೀಶ್ ಕಾಸರವಳ್ಳಿ)