ಹರಿಯಾಣ: ಅಂದು ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಟೀಕಿಸುತ್ತಿದ್ದರು. ಇಂದು ಅದೇ ಕಾಂಗ್ರೆಸ್ ನಾಯಕರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಮೋದಿ ವ್ಯಂಗ್ಯವಾಡಿದ್ದಾರೆ.
ಹರಿಯಾಣದ ರೇವಾರಿಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟಕ್ಕೆ ಬಾರಿ 400ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಅಂತ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ರೇವಾರಿಗೆ ಬಂದ ನಂತರ ನಾನು ಪ್ರಧಾನಿಯಾದೆ. ಈ ಬಾರಿ ಮತ್ತೆ ರೇವಾರಿಗೆ ಬಂದಿರುವುದರಿಂದ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಜನರು ಹೇಳುತ್ತಿದ್ದಾರೆ. ಅಬ್ಕಿ ಬಾರ್ ಎನ್‌ಡಿಎ ಸರ್ಕಾರ್ 400 ಪಾರ್ ಅಂತ ಮೋದಿ ಘೋಷಣೆ ಮೊಳಗಿಸಿದರು.