ಬಂಗಾಳದಲ್ಲಿ ಬಿಜೆಪಿ ಸೋಲಿಗೆ ‘ಜೈ ಶ್ರೀರಾಮ್’ ಘೋಷಣೆಯೇ ಕಾರಣ : ಕಪಿಲ್ ಸಿಬಲ್

Prasthutha|

ಹೊಸದಿಲ್ಲಿ :  ದುರಂಹಕಾರ, ತೋಳ್ಬಲ, ಹಣಬಲ ಮತ್ತು ಜೈ ಶ್ರೀರಾಮ್ ಘೋಷಣೆಯೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಅವರು, ದುರಂಹಕಾರ, ತೋಳ್ಬಲ, ಹಣಬಲ ಮತ್ತು ಜೈ ಶ್ರೀರಾಮ ಘೋಷಣೆಯನ್ನು ರಾಜಕೀಯಕ್ಕೆ ಬಳಸಿದ್ದರಿಂದ ಬಿಜೆಪಿ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ವಿಭಜನೆಯ ಸಿದ್ದಾಂತ ಮತ್ತು ಚುನಾವಣಾ ಆಯೋಗ ಬಳಕೆಯಿಂದಲೂ ಬಿಜೆಪಿ ಸೋಲು ಅನುಭವಿಸುವಂತಾಗಿದೆ. ಅವೆಲ್ಲವನ್ನೂ ಮೆಟ್ಟಿ ನಿಂತು ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಲು ಸಿದ್ಧತೆ ನಡೆಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಕಪಿಲ್ ಸಿಬಲ್ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -