’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಪಾದ್ರಿ ಮೇಲೆ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Prasthutha|

ಶ್ರೀನಗರ: ‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಪಾದ್ರಿಯೊಬ್ಬರಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಈ ಕುರಿತ ವೀಡಿಯೋ ವ್ಯಾಪಕ ವೈರಲಾಗಿದ್ದು, ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.
‘ಜೈ ಶ್ರೀರಾಮ್‌’ ಹೇಳಲು ಎಂದು ಬಲವಂತಪಡಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತರ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿರುವ ವೀಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದು, ಪಾದ್ರಿಯು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ.

- Advertisement -

ಪೊಲೀಸರು ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವ ಬದಲು ತನ್ನನ್ನೇ ಬಂಧಿಸಿದ್ದಾರೆ ಎಂದು ಪಾದ್ರಿ ಆರೋಪಿಸಿದ್ದಾರೆ.

ಆದರೆ ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ಈ ಕುರಿತು ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ. ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.

Join Whatsapp