ಬೆಂಗಳೂರು : ಇಂದು ವಿಧಾನಸಭೆಯಲ್ಲಿ ತೈಲ ದರ ಏರಿಕೆಯ ಚರ್ಚೆಯ ನಡುವೆ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ವಿಚಾರ ಪ್ರಸ್ತಾಪಗೊಂಡು ಕಾಂಗ್ರೆಸ್ ನಾಯಕರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ವಿಧಾನಸಭೆಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಟ್ವಿಟ್ ವಿಚಾರ ಪ್ರಸ್ತಾಪಗೊಂಡ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಜೈ ಶ್ರೀರಾಮ್ ಎಂಬುದಾಗಿ ಘೋಷಣೆ ಕೂಗಿದರು. ಇತ್ತ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ಭಾರತ್ ಮಾತಾಕಿ ಜೈ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಆಗ ಸಿದ್ದರಾಮಯ್ಯ ಯಾಕ್ರಪ್ಪಾ..? ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಕ್ಕಾ ಎಂದು ಪ್ರಶ್ನಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅಯೋಧ್ಯೆ ರಾಮಮಂದಿರಕ್ಕೆ ಹಣ ಕೊಟ್ರಾ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಇದಕ್ಕೆ ಸಿದ್ದರಾಮಯ್ಯನವರು ನಾನು ನಮ್ಮೂರಿನ ರಾಮನಿಗೆ ಕೊಟ್ಟಿದ್ದೇನೆ. ಅಯೋಧ್ಯೆ ರಾಮನಿಗೆ ಹಣ ಕೊಟ್ಟಿಲ್ಲ ಎಂದು ಪುನರುಚ್ಚರಿಸಿದರು.