ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ-ರಾಹುಲ್ ಗೆ ಜೈಲು: ಸುಬ್ರಮಣಿಯನ್ ಸ್ವಾಮಿ ಭವಿಷ್ಯ

Prasthutha|

ಮಡಿಕೇರಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೈಲು ಸೇರಲಿದ್ದಾರೆ ಎಂದು ಅರ್ಥಶಾಸ್ತ್ರಜ್ಞ, ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಭವಿಷ್ಯ ನುಡಿದಿದ್ದಾರೆ.

- Advertisement -

ರಾಹುಲ್ ಗಾಂಧಿ ಅವರು ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಅವರು, ಯಾರು ಭಾರತವನ್ನು ಒಡೆದರೋ ಅವರೇ ತಾವು ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತವಾಗಿ “ಭಾರತ್ ಜೋಡೋ”ಎಂದು ತಾವೇ ಒಡೆದ ಭಾರತವನ್ನು ಜೋಡಿಸಲು ಹೊರಟಂತಿದೆ. ರಾಹುಲ್ ಗಾಂಧಿಗೆ ಮಾತ್ರ ಭಾರತ ಒಡೆದಂತೆ ಕಾಣುತ್ತಿದೆಯೇ ವಿನಃ ನಿಜವಾದ ಭಾರತ ಒಗ್ಗಟ್ಟಿನ ಭಾರತವಾಗಿದೆ. ಎಲ್ಲೂ ಒಡೆದ ಭಾರತದಂತಿಲ್ಲ ಎಂದು ಲೇವಡಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಪ್ರಧಾನಿಯಾಗಿ ಕೈಗೊಂಡ ಕೆಲವೊಂದು ನಿರ್ಧಾರಗಳ ಬಗ್ಗೆ ಆಕ್ಷೇಪವಿದೆ. ಕೆಲವು ವಿಚಾರಗಳಲ್ಲಿ ದಿಟ್ಟ ಹೆಜ್ಜೆ ಇಡುತ್ತಿಲ್ಲವೆಂದು ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

- Advertisement -

ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ವಿಚಾರಗಳ ಬಗ್ಗೆ ಬಿಗಿ ನಿರ್ಧಾರಗಳನ್ನು ಮೋದಿ ಕೈಗೊಂಡಿಲ್ಲ ಎಂಬ ಅಸಮಾಧಾನವಿದೆ. ಹೀಗಿದ್ದರೂ ದೇಶದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಬೆಂಬಲದಿಂದ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಸುಬ್ರಹ್ಮಣ್ಯ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಅಧಿಕಾರಸ್ಥರು ತಪ್ಪು ನಿರ್ಧಾರ ಕೈಗೊಂಡಾಗ ತಿಳಿದಿದ್ದೂ ಯಾಕೆ ನೀವು ಮೌನವಾಗಿದ್ದೀರಿ ಎಂದು ಜನರು ಪ್ರಶ್ನಿಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪ್ರಧಾನಿ ಬಗ್ಗೆ ಶ್ಲಾಘಿಸುವುದು, ಟೀಕಿಸುವುದು ಒಳ್ಳೆಯ ಲಕ್ಷಣ. ತಪ್ಪು ತೀರ್ಮಾನಗಳ ಕುರಿತಂತೆ ಹಲವು ಬಾರಿ ಪ್ರಧಾನಿಗೆ ತಾನು ಪತ್ರ ಬರೆದಿದ್ದೇನೆ. ಆದರೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

Join Whatsapp