ಕಲಬುರಗಿ: ನಾವು ಸೇಡು ತೀರಿಸಿಕೊಂಡರೆ ಬಿಜೆಪಿಯವರಿಗೆ ಜೈಲುಗಳು ಸಾಕಾಗಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾಂಗ್ರೆಸ್ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ ಎಂಬ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಅವರಿಗೆ (ಬಿಜೆಪಿಯವರಿಗೆ) ಜೈಲುಗಳು ಸಾಕಾಗಲ್ಲ ಎಂದರು.
ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಜನ ಅನುಸರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ಅವರು ವಾಗ್ದಾಳಿ ಮಾಡಿದರು.