ಜೈನ ಮುನಿ ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Prasthutha|

ಚಿಕ್ಕೋಡಿ: ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆ ಆರೋಪಿಗಳನ್ನು ಜುಲೈ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -


ಆರೋಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್ ದಲಾಯತ್ ಅವರನ್ನು ಏಳು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಕಾರಣ ಪೊಲೀಸರು, ಸೋಮವಾರ ಮತ್ತೆ ಇಲ್ಲಿನ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಐದು ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.



Join Whatsapp