ಜಯರಾಮ್ ರಮೇಶ್ , ಮನ್ಸೂರ್ ಅಲಿ ಖಾನ್ ಜಯ ಖಚಿತ: ಜಮೀರ್ ಅಹ್ಮದ್ ಖಾನ್

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷವು ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಜಯರಾಮ್ ರಮೇಶ್ ಮೊದಲನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಇದೀಗ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಲು ಪಕ್ಷವು ನಿರ್ಧರಿಸಿದೆ ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವ ಬಿ. ಝಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

- Advertisement -


ಇಂದು ಸಿ ಎಲ್ ಪಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲನೇ ಅಭ್ಯರ್ಥಿಗೆ ಮತ ಹಾಕಿ, ಇನ್ನೂ 25 ಮತಗಳು ಉಳಿಯುತ್ತವೆ. ಇನ್ನು ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಗೆ ಅಷ್ಟಾಗಿ ಸಂಖ್ಯಾಬಲ ಇಲ್ಲ ಹಾಗೂ ಇತರ ಪಕ್ಷಗಳ ಶಾಸಕರೂ ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಹಾಗಾಗಿ, ಈ ಬಾರಿ ಕಾಂಗ್ರೆಸ್ ನ ಅಭ್ಯರ್ಥಿಗಳು ಗೆಲ್ಲುವ ಭರವಸೆ ನಮಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Join Whatsapp