ಕಾಂಗ್ರೆಸ್’ಗೆ ಗುಡ್ ಬೈ ಹೇಳಿದ್ದ ಜೈವೀರ್ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ

Prasthutha|

ನವದೆಹಲಿ: 3 ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್’ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಜೈವೀರ್ ಶೆರ್ಗಿಲ್ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ ಮಾಡಲಾಗಿದೆ.

- Advertisement -


ಇದರೊಂದಿಗೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯತ್ವ ನೀಡಲಾಗಿದೆ.


ಜೈವೀರ್ ಶೆರ್ಗಿಲ್ ಕಳೆದ ಆಗಸ್ಟ್ 24 ರಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿ ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿದ್ದರು.

Join Whatsapp