Home ಕರಾವಳಿ ಸಂಘಪರಿವಾರದಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

ಸಂಘಪರಿವಾರದಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

ಮಂಗಳೂರು: ಇತ್ತೀಚೆಗೆ ಸುರತ್ಕಲ್‍’ನ ಕಾಟಿಪಳ್ಳದಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಅವರು 1 ಲಕ್ಷ ರೂ. ಚೆಕ್ ವಿತರಿಸಿದ್ದಾರೆ.

ಜಲೀಲ್ ಮನೆಗೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 1 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು.

ಈ ಹಿಂದೆ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ ಗೆ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

Join Whatsapp
Exit mobile version