ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಯಾರಿ: ಜಾಮಿಯಾ ಮಿಲ್ಲಿಯಾದ ಇಬ್ಬರು ವಿದ್ಯಾರ್ಥಿಗಳ ಬಂಧನ

Prasthutha|

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯ ಚಿತ್ರ ಪದರ್ಶನಕ್ಕೆ ತಯಾರಿ ಮಾಡಿದ ಆರೋಪದಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ವಿವಿಯ ಗೇಟ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.

- Advertisement -


ಅಲ್ಲದೆ, ಕ್ಯಾಂಪಸ್ ನಲ್ಲಿ ಅನಧಿಕೃತ ಜಮಾವಣೆ ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.

- Advertisement -