NRC ವಿರೋಧಿ ಹೋರಾಟಗಾರ್ತಿ ಸಫೂರಾ ಝರ್ಗರ್’ಗೆ ಜಾಮಿಯಾ ಇಸ್ಲಾಮಿಯಾ ವಿವಿ ಪ್ರವೇಶ ನಿಷೇಧ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Prasthutha|

ನವದೆಹಲಿ: NRC ವಿರೋಧಿ ಹೋರಾಟಗಾರ್ತಿ ಸಫೂರಾ ಝರ್ಗರ್ ಅವರಿಗೆ ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಪ್ರವೇಶವನ್ನು ನಿರಾಕರಿಸಿದ ನಿರ್ಧಾರವನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಕ್ಯಾಂಪನ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ವಿಶ್ವವಿದ್ಯಾಲಯದ ಈ ನಿರ್ಧಾರ ತಾರತಮ್ಯದ ಪರಮಾವಧಿ ಎಂದು ಬಣ್ಣಿಸಿದ ಸಫೂರ ಝರ್ಗರ್ ಮತ್ತು ಪ್ರತಿಭಟನಕಾರರು, ವಿವಿಯ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಾಮಿಯಾ ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗವು ಝರ್ಗರ್ ಅವರ ಪ್ರಬಂಧ ತೃಪ್ತಿಕರವಾಗಿಲ್ಲ ಎಂಭ ಕಾರಣ ನೀಡಿ ಅವರ ಪ್ರವೇಶವನ್ನು ರದ್ದುಗೊಳಿಸಿತ್ತು. ಝರ್ಗರ್ ಅವರು 2019ರಲ್ಲಿ ಎಂಫಿಲ್/ಪಿಎಚ್ ಡಿಯಲ್ಲಿ ಸಮಾಜಶಾಸ್ತ್ರ ವಿಭಾಗಕ್ಕೆ ಸೇರಿಕೊಂಡಿದ್ದರು.

- Advertisement -

ಈ ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO), ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್ (MSF), ಫ್ರೆಟರ್ನಿಟಿ ಮೂವ್ಮೆಂಟ್, DISSC, AIRSO, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸಫೂರ ಝರ್ಗರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದವು.

Join Whatsapp