Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ 51, ಕಾಂಗ್ರೆಸ್‌ಗೆ 32 ಸ್ಥಾನಗಳು

ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ 51, ಕಾಂಗ್ರೆಸ್‌ಗೆ 32 ಸ್ಥಾನಗಳು

ಶ್ರೀನಗರ: ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮವಾಗಿದೆ

ಎನ್‌ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 51 ಸ್ಥಾನಗಳಲ್ಲಿ, ಕಾಂಗ್ರೆಸ್ ಪಕ್ಷವು 32 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತೀರ್ಮಾನವಾಗಿದೆ. ಸಿಪಿಐಎಂ ಮತ್ತು ಜೆಕೆಎನ್‌ಪಿಪಿ ಪಕ್ಷಗಳಿಗೆ ತಲಾ ಒಂದು ಸ್ಥಾನ ನೀಡಲಾಗಿದೆ.

ಕೇಂದ್ರಾಡಳಿತ ಪ್ರದೇಶದ ಐದು ಸ್ಥಾನಗಳಲ್ಲಿ ಸ್ನೇಹಪೂರ್ವಕ ಸ್ಪರ್ಧೆ ಇರಲಿದೆ ಎಂದು ಉಭಯ ಪಕ್ಷಗಳು ಹೇಳಿವೆ.

ದೇಶದಲ್ಲಿ ಕೋಮು ಆಧಾರದಲ್ಲಿ ವಿಭಜನೆ ಸೃಷ್ಟಿಸಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ನಡೆಸುವ ಉದ್ದೇಶದೊಂದಿಗೆ ಇಂಡಿಯಾ ಮೈತ್ರಿಕೂಟವನ್ನು ಆರಂಭಿಸಲಾಗಿದೆ ಎಂದು ಇದೇ ವೇಳೆ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಹಾಗೂ ದೇಶದ ಆತ್ಮವನ್ನು ರಕ್ಷಿಸುವ ಉದ್ದೇಶವು ಎರಡೂ ಪಕ್ಷಗಳಿಗೆ ಇದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

Join Whatsapp
Exit mobile version