ಶ್ರೀನಗರ: ಜಮ್ಮು-ಕಾಶ್ಮೀರದ ವಿಧಾನಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು ಶೇ.59 ರಷ್ಟು ಮತದಾನ ನಡೆದಿದ್ದು, ಬಹತೇಕ ಶಾಂತಿಯುತವಾಗಿ ನೆರವೇರಿದೆ.
2019ರಲ್ಲಿ ಹಿಂದಿನ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ಇದು ಮೊದಲ ಚುನಾವಣೆಯಾಗಿದೆ. 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಸೆ.18 ರಂದು ಚುನಾವಣೆ ನಡೆದಿದೆ. ಶೇ.59 ರಷ್ಟು ಚುನಾವಣೆ ನಡೆದಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪಿಕೆ ಪೋಲ್ ಹೇಳಿದ್ದಾರೆ.
ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ 77.23ರಷ್ಟು ಮತದಾನವಾಗಿದ್ದರೆ, ಪುಲ್ವಾಮಾ ಜಿಲ್ಲೆಯಲ್ಲಿ ಅತಿ ಕಡಿಮೆ ಶೇ 43.87ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.