ಜಮ್ಮು-ಕಾಶ್ಮೀರ ಚುನಾವಣೆ: ಸೋಲನ್ನು ಒಪ್ಪಿ ಜನರ ತೀರ್ಪಿಗೆ ತಲೆಬಾಗುತ್ತೇನೆಂದ ಮೆಹಬೂಬಾ ಮುಫ್ತಿ ಪುತ್ರಿ

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸೋಲೊಪ್ಪಿಕೊಂಡಿದ್ದಾರೆ.

- Advertisement -


ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಅವರು 5,000ಕ್ಕೂ ಹೆಚ್ಚು ಮತಗಳಿಂದ ಪರಾಭವಗೊಂಡಿದ್ದಾರೆ.


ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಬಿಲ್ಬೆಹರಾದಲ್ಲಿ ನಾನು ಜನರಿಂದ ಸ್ವೀಕರಿಸಿರುವ ಪ್ರೀತಿ ಮತ್ತು ಅಕ್ಕರೆ ಎಂದೂ ನನ್ನ ನೆನಪಿನಲ್ಲಿರುತ್ತದೆ. ಇಡೀ ಚುನಾವಣಾ ಪ್ರಚಾರದಲ್ಲಿ ಕಠಿಣ ಪರಿಶ್ರಮ ಹಾಕಿದ ಪಿಡಿಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಇದೇ ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಇಲ್ತಿಜಾ ಮುಫ್ತಿ ಹೇಳಿದ್ದಾರೆ.

- Advertisement -


ವಿಧಾನಸಭೆಯಲ್ಲಿ 90 ಸದಸ್ಯಬಲ ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆದವು. ಇದು 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಸದ್ಯ ಕಾಂಗ್ರೆಸ್ 50ರಲ್ಲಿ ಮತ್ತು ಬಿಜೆಪಿ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತ ದಾಟಿ ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು ಇಡುತ್ತಿದೆ.



Join Whatsapp