ಜಮ್ಮು ಕಾಶ್ಮೀರ ಭಾರತದ ಕಿರೀಟ: ಝಡ್-ಮೋರ್ಹ್ ಸುರಂಗ ಉದ್ಘಾಟಿಸಿದ ಪ್ರಧಾನಿ ಮೋದಿ

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ಗೆ ವರ್ಷಪೂರ್ತಿ ಸಂಪರ್ಕವನ್ನು ಕಲ್ಪಿಸುವ ಝಡ್-ಮೋರ್ಹ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

- Advertisement -

ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯಲ್ಲಿ ಇಂದು 6.5 ಕಿ.ಮೀ ಉದ್ದದ ಝಡ್-ಮೋರ್ಹ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದು ಸೋನಾಮಾರ್ಗ್ ಪ್ರವಾಸಿ ರೆಸಾರ್ಟ್‌ಗೆ ವರ್ಷಪೂರ್ತಿ ಪ್ರವೇಶವನ್ನು ಒದಗಿಸುತ್ತದೆ.

ಬಳಿಕ‌ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸೋನಾಮಾರ್ಗ್‌ನ ಝಡ್-ಮೋರ್ಹ್ ಸುರಂಗದ ಬಳಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 7 ಜನರಿಗೆ ಇಂದು ಗೌರವ ಸಲ್ಲಿಸಿದರು. ಕಾಶ್ಮೀರ ತನ್ನ ‘ಭೂಮಿ ಮೇಲಿನ ಸ್ವರ್ಗ’ ಗುರುತನ್ನು ಮರಳಿ ಪಡೆಯುತ್ತಿದೆ ಎಂದು ಮೋದಿ ಹೇಳಿದರು.

- Advertisement -

ದೇಶ ಮತ್ತು ಜಮ್ಮು ಕಾಶ್ಮೀರದ ಪ್ರಗತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಅತ್ಯಂತ ಕಷ್ಟಕರ ಸಂದರ್ಭಗಳಲ್ಲಿ ಕೆಲಸ ಮಾಡಿದ ಎಲ್ಲಾ ಸಹೋದರರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ.” ಅಲ್ಲದೆ, ನಮ್ಮ 7 ಕಾರ್ಮಿಕ ಸಹೋದ್ಯೋಗಿಗಳು ತಮ್ಮ ಪ್ರಾಣವನ್ನು ಕಳೆದುಕೊಂಡರು. ಆದರೆ ಬೇರೆಯವರು ಎಲ್ಲಾ ಸವಾಲುಗಳನ್ನು ನಿವಾರಿಸುವ ಮೂಲಕ ಈ ಕಾರ್ಯವನ್ನು ಪೂರ್ಣಗೊಳಿಸಿದರು. ಇಂದು, ನಾವು ಕಳೆದುಕೊಂಡ ಆ 7 ಸಹೋದ್ಯೋಗಿಗಳನ್ನು ನಾನು ನೆನಪಿಸಿಕೊಳ್ಳಲು ಬಯಸುತ್ತೇನೆ ಎಂದು ಪ್ರಧಾನಿ ಹೇಳಿದರು.



Join Whatsapp