ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Prasthutha|

ನವದೆಹಲಿ: ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಈ ಕ್ರಮ ಕೈಗೊಂಡಿದೆ.ಹುರಿಯತ್ ಕಾನ್ಫರೆನ್ಸ್‌ನ ಅಂಗ ಸಂಸ್ಥೆ JKNF ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘ” ಎಂದು ಕೇಂದ್ರ ಗೃಹ ಸಚಿವಾಲಯವು ಘೋಷಿಸಿದೆ.

- Advertisement -

JKNF ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಎಂದು ಸರ್ಕಾರ ಕಾರಣ ಹೇಳಿದೆ.



Join Whatsapp