Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಈ ಕ್ರಮ ಕೈಗೊಂಡಿದೆ.ಹುರಿಯತ್ ಕಾನ್ಫರೆನ್ಸ್‌ನ ಅಂಗ ಸಂಸ್ಥೆ JKNF ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘ” ಎಂದು ಕೇಂದ್ರ ಗೃಹ ಸಚಿವಾಲಯವು ಘೋಷಿಸಿದೆ.

JKNF ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಎಂದು ಸರ್ಕಾರ ಕಾರಣ ಹೇಳಿದೆ.

Join Whatsapp
Exit mobile version