ಜಮ್ಮು – ಕಾಶ್ಮೀರ ಕಾರಾಗೃಹ ಡಿಜಿಪಿ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರ ಮೃತದೇಹವು ಜಮ್ಮುವಿನ ತಮ್ಮ ನಿವಾಸದಲ್ಲಿ ಸಂಶಯಾಸ್ಪದವಾಗಿ ಪತ್ತೆಯಾಗಿದೆ.

- Advertisement -

1992ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ 57 ವರ್ಷದ ಲೋಹಿಯಾ ಅವರು ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ವಿಭಾಗದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ (ಅ.3) ಅವರ ಮೃತದೇಹ ಕತ್ತು ಸೀಳಿದ ಮತ್ತು ಸುಟ್ಟು ಗಾಯಗಳ ಸ್ಥಿತಿಯಲ್ಲಿ ಜಮ್ಮುವಿನ ಹೊರವಲಯದಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿತ್ತು.

ಲೋಹಿಯಾ ಅವರ ಮನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯಾಸಿರ್ ಎಂಬವನನ್ನು ಪ್ರಮುಖ ಆರೋಪಿ ಎಂದು ಶಂಕಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

- Advertisement -

ವಿಧಿವಿಜ್ಞಾನ ತಂಡಗಳು ಮತ್ತು ಅಪರಾಧ ತಂಡಗಳು ಸ್ಥಳದಲ್ಲಿವೆ. ತನಿಖಾ ಪ್ರಕ್ರಿಯೆ ಆರಂಭವಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಕುಟುಂಬವು ತನ್ನ ಹಿರಿಯ ಅಧಿಕಾರಿಯ ಸಾವಿನ ಬಗ್ಗೆ ದುಃಖ ಮತ್ತು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ  ಎಂದು ಪೊಲೀಸರು  ತಿಳಿಸಿದ್ದಾರೆ.



Join Whatsapp