ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

Prasthutha|

ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರು ಬುಧವಾರ ರಾತ್ರಿ 10.35ರ ಸುಮಾರಿಗೆ ಶ್ರೀನಗರದ ಹೈದರ್ ಪೋರಾ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.


ಸೈಯದ್ ಗಿಲಾನಿ ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳುವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ತಮ್ಮ ಸ್ಥಾನಕ್ಕೆ ಕಳೆದ ವರ್ಷವಷ್ಟೇ ರಾಜೀನಾಮೆ ನೀಡಿದ್ದರು. ಅವರು ಇಬ್ಬರು ಪುತ್ರರು ಮತ್ತು ಒಬ್ಬ ಮಗಳು ಸೇರಿ ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement -