Home ಟಾಪ್ ಸುದ್ದಿಗಳು ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು: ಚಿದಂಬರಂ

ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು: ಚಿದಂಬರಂ

ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು ಅತ್ಯಂತ ಪ್ರಮುಖವಾದದ್ದು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.


ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದಾರೆ. ಅವರ ಭದ್ರತೆಯನ್ನು ನೋಡಿಕೊಳ್ಳಬೇಕಿರುವುದು ಮುಖ್ಯಮಂತ್ರಿಗಳ ಹೊಣೆ. ಆದರೆ, ಮುಖ್ಯಮಂತ್ರಿಗೆ ಯಾವುದೇ ಅಧಿಕಾರವಿಲ್ಲ. ಹೀಗಾಗಿ, ಜಮ್ಮು–ಕಾಶ್ಮೀರಕ್ಕೆ ಕೂಡಲೇ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು ಅತ್ಯಂತ ಪ್ರಮುಖವಾದದ್ದು ಎಂದಿದ್ದಾರೆ.


ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪರಿಶೀಲನೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಭೆ ನಡೆಸಿರುವ ಚಿತ್ರಗಳು ಏನು ಹೇಳುತ್ತವೆ ಎಂದು ಪ್ರಶ್ನಿಸಿದ್ದಾರೆ.
‘ಸಭೆಯಲ್ಲಿ ಚುನಾಯಿತ ಮುಖ್ಯಮಂತ್ರಿಗಳು ಹಾಜರಿರಲಿಲ್ಲ. ಅವರಿಗೆ ಆಹ್ವಾನ ಇತ್ತೇ? ಇಲ್ಲವೇ? ಎಂಬ ಬಗ್ಗೆ ನನಗೆ ತಿಳಿದಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯಿಸುವ ಕಾನೂನಿನಡಿ, ಪೊಲೀಸ್ ಮತ್ತು ಕಾನೂನು ಹಾಗೂ ಸುವ್ಯವಸ್ಥೆ ಲೆಫ್ಟಿನೆಂಟ್ ಗವರ್ನರ್ಗೆ ಮೀಸಲಾಗಿದೆ’ಎಂದು ಬರೆದುಕೊಂಡಿದ್ದಾರೆ.

Join Whatsapp
Exit mobile version