Home ಟಾಪ್ ಸುದ್ದಿಗಳು ತ್ರಿವರ್ಣಧ್ವಜದ ಬಗ್ಗೆ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ | ಪ್ರಕರಣ ದಾಖಲು

ತ್ರಿವರ್ಣಧ್ವಜದ ಬಗ್ಗೆ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ | ಪ್ರಕರಣ ದಾಖಲು

ಜೌನ್‌ಪುರ: ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಪ್ರಕರಣ ದಾಖಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಈ ಹಿಂದೆ ಇದ್ದ ರಾಜ್ಯ ಧ್ವಜವನ್ನು ಮರಳಿ ಅಧಿಕೃತಗೊಳಿಸುವವರೆಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಸದಸ್ಯರು ರಾಷ್ಟ್ರಧ್ವಜವನ್ನು ಹಾರಿಸುವುದಿಲ್ಲ ಎಂದು ಮುಫ್ತಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಇದು ದೇಶದ್ರೋಹದ ಹೇಳಿಕೆ ಎಂದು ಆರೋಪಿಸಿರುವ ಜೌನ್‌ಪುರದ ವಕೀಲ ಹಿಮಾಂಶು ಶ್ರೀವಾಸ್ತವ್​ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ನ್ಯಾಯಾಧೀಶರು ಮೆಹಬೂಬಾ ಮುಫ್ತಿಗೆ ನೋಟಿಸ್ ನೀಡಿದ್ದಾರೆ.

Join Whatsapp
Exit mobile version