ಜಮ್ಮು-ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಯ ಮತ ಎಣಿಕೆ | ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕಾರ್ ಮೈತ್ರಿಕೂಟಕ್ಕೆ ಭಾರೀ ಮುನ್ನಡೆ

Prasthutha|

ಶ್ರೀನಗರ : ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದು, ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲ್ಪಟ್ಟ ಬಳಿಕ ನಡೆದಿರುವ ಮೊದಲ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕಾರ್ ಮೈತ್ರಿಕೂಟಕ್ಕೆ ಭಾರೀ ಮುನ್ನಡೆ ಸಿಕ್ಕಿದೆ. ಇಂದು ಮುಂಜಾನೆಯಿಂದ ಮತ ಎಣಿಕೆ ಆರಂಭವಾಗಿದ್ದು, ಗುಪ್ಕಾರ್ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.

- Advertisement -

ಇತ್ತೀಚಿನ ವರದಿಗಳ ಪ್ರಕಾರ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಮೆಹಬೂಬ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಒಳಗೊಂಡ ಗುಪ್ಕಾರ್ ಮೈತ್ರಿಕೂಟಕ್ಕೆ 81 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

20 ಜಿಲ್ಲೆಗಳಲ್ಲಿ 280 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ ಈ ಚುನಾವಣೆಗೆ ಬಳಸಲಾಗಿದೆ. 25 ದಿನಗಳಲ್ಲಿ 8 ಸುತ್ತಿನಲ್ಲಿ ಮತದಾನ ನಡೆದಿತ್ತು.

- Advertisement -

ಜಮ್ಮು-ಕಾಶ್ಮೀರಕ್ಕಿದ್ದ ಸಂವಿಧಾನದ ಪರಿಚ್ಛೇದ 370 ಅನ್ನು ರದ್ದುಪಡಿಸಿ, ವಿಶೇಷ ಸ್ಥಾನಮಾನ ಕಿತ್ತುಕೊಂಡಿರುವ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಸ್ಥಳೀಯ ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿ ಗುಪ್ಕಾರ್ ಮೈತ್ರಿಕೂಟ ರಚಿಸಿಕೊಂಡಿವೆ.  



Join Whatsapp