ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲಾತಿ, ಜಮ್ಮು-ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ ಅಂಗೀಕಾರ

Prasthutha|

ನವದೆಹಲಿ: ಕಾಶ್ಮೀರಿ ಪಂಡಿತ ವಲಸಿಗರು ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಸ್ಥಳಾಂತರಗೊಂಡ ಜನರಿಗೆ ಮೀಸಲಾತಿ ನೀಡುವ ಎರಡು ಮಸೂದೆಗಳನ್ನು ರಾಜ್ಯಸಭೆ ಅಂಗೀಕರಿಸಿದೆ.

- Advertisement -

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2023 ಲೋಕಸಭೆಯಲ್ಲಿ ಈಗಾಗಲೇ (ಡಿಸೆಂಬರ್ 6) ಅಂಗೀಕರಿಸಿತ್ತು.

ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಈ ಹಿಂದೆ ಜಮ್ಮುವಿನಲ್ಲಿ 37 ಸ್ಥಾನಗಳಿದ್ದವು, ಈಗ ಹೊಸ ಡಿಲಿಮಿಟೇಶನ್ ಆಯೋಗದ ನಂತ್ರ 43 ಸ್ಥಾನಗಳಿವೆ. ಈ ಹಿಂದೆ ಕಾಶ್ಮೀರದಲ್ಲಿ 46 ಇದ್ದವು, ಈಗ 47 ಇವೆ. ಪಾಕಿಸ್ತಾನ ಆಕ್ರಮಿತ-ಕಾಶ್ಮೀರದಲ್ಲಿ, ಪಿಒಕೆ ನಮ್ಮದಾಗಿರುವುದರಿಂದ 24 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ ಮತ್ತು ಅದನ್ನು ನಮ್ಮಿಂದ ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಮಸೂದೆಯು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ಕಾಯ್ದೆ, 2004ನ್ನ ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ. ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಸದಸ್ಯರಿಗೆ ವೃತ್ತಿಪರ ಸಂಸ್ಥೆಗಳಲ್ಲಿ ನೇಮಕಾತಿ ಮತ್ತು ಪ್ರವೇಶದಲ್ಲಿ ಮೀಸಲಾತಿ ಒದಗಿಸಲು ಇದನ್ನ ಜಾರಿಗೆ ತರಲಾಗಿದೆ.



Join Whatsapp