‘ಜನ ಗಣ ಮನ, ವಂದೇ ಮಾತರಂ’ಗೆ ಸಮಾನ ಸ್ಥಾನಮಾನ: ದೆಹಲಿ ಹೈಕೋರ್ಟ್ ಗೆ ಕೇಂದ್ರ

Prasthutha|

ನವದೆಹಲಿ: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಎರಡೂ ಒಂದೇ ಮಟ್ಟದಲ್ಲಿ ನಿಲ್ಲುತ್ತವೆ ಮತ್ತು ದೇಶದ ಪ್ರತಿಯೊಬ್ಬ ನಾಗರಿಕನೂ ಎರಡಕ್ಕೂ ಸಮಾನ ಗೌರವವನ್ನು ತೋರಿಸಬೇಕು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ.

- Advertisement -

ವಂದೇ ಮಾತರಂ ಮತ್ತು ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ನೀಡುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ, “ಭಾರತದ ಜನರ ಭಾವನೆಗಳು ಮತ್ತು ಮನಸ್ಥಿತಿಯಲ್ಲಿ ರಾಷ್ಟ್ರಗೀತೆಗೆ ವಿಶಿಷ್ಟ ಮತ್ತು ವಿಶೇಷ ಸ್ಥಾನವನ್ನು ಹೊಂದಿದೆ” ಎಂದು ಹೇಳಿದೆ.

ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗೃಹ ಸಚಿವಾಲಯ, ಶಿಕ್ಷಣ ಸಚಿವಾಲಯ, ಸಂಸ್ಕೃತಿ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿತ್ತು.

Join Whatsapp