ಮನೆಯಲ್ಲಿ ಮತ ಚಲಾಯಿಸಿದ ಜನಾರ್ದನ ಪೂಜಾರಿ

Prasthutha|

ಬಂಟ್ವಾಳ : ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ಬಿ.ಮೂಡಾ ಗ್ರಾಮದ ಬಸ್ತಿಪಡ್ಪುವಿನ ತಮ್ಮ ನಿವಾಸದಲ್ಲಿ ಸೋಮವಾರ ಮತ ಚಲಾಯಿಸಿದರು.

- Advertisement -


ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿ ದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರ ಪಟ್ಟಿಯಂತೆ ಪೂಜಾರಿ ಅವರಿಗೆ 87 ವರ್ಷ ವಯಸ್ಸಾಗಿದ್ದು ಮತದಾನ ಪ್ರಕ್ರಿಯೆ ನಡೆಸಲಾಯಿತು.



Join Whatsapp