ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆಯಲಿರುವ ಚುನಾವಣೆ ರಂಗೇರುತ್ತಿದ್ದು, ಕೆಆರ್ ಪಿಪಿ ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.
ಇಂದು (ಸೋಮವಾರ) ಬೆಳಗ್ಗೆ ಕಾವೇರಿ ನಿವಾಸಕ್ಕೆ ಜನಾರ್ದನ ರೆಡ್ಡಿಯರು ತೆರಳಿದ್ದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ವೇಳೆ ಡಿಸಿಎಂ ಡಿಕೆಶಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.