ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಜನಾರ್ದನ ರೆಡ್ಡಿ ಎಲ್ಲಿಯೂ ಹೇಳಿಲ್ಲ: ಶ್ರೀರಾಮುಲು

Prasthutha|

ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಆರಂಭಿಸುತ್ತಾರೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಬಿಜೆಪಿ ಸಹ ಅವರನ್ನು ಕೈಬಿಡುವುದಿಲ್ಲ. ಪಕ್ಷದಲ್ಲಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖಂಡರಾದ ಜನಾರ್ದನ ರೆಡ್ಡಿ ಸಾರ್ವಜನಿಕರ ಬದುಕಲ್ಲಿ ಬರಬೇಕು ಎಂದಷ್ಟೇ ಹೇಳಿದ್ದಾರೆ ಹೊರತು ಪಕ್ಷವನ್ನು ಮೀರಿ, ಪಕ್ಷಕ್ಕೆ ತೊಂದರೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ನಾನು ಸಹ ಪಕ್ಷದ ಹಿರಿಯರ ಜೊತೆ ಚರ್ಚೆಮಾಡಿದ್ದೇನೆ. ಮುಖ್ಯಮಂತ್ರಿ ಅವರು ಸಹ ಅವರೊಂದಿಗೆ ಮಾತನಾಡಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಅವರೊಂದಿಗೆ ಸ್ನೇಹ ಕಳೆದುಕೊಳ್ಳುವುದಿಲ್ಲ. ಪಕ್ಷ ರಾಜಕೀಯವಾಗಿ ಸ್ಥಾನ, ಮಾನ ನೀಡಿದೆ. ಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ. ಅವರೇ ಪರಿಹಾರ ಒದಗಿಸುವ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಹೇಳಿದರು.

Join Whatsapp