ಬೆಂಗಳೂರು: ಕಳೆದ ತಿಂಗಳಷ್ಟೇ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತವನ್ನು ಹಾಕಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ಧನ ರೆಡ್ಡಿ ನಾಳೆ ತಮ್ಮ ಮೂಲ ಪಕ್ಷ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ಜನಾರ್ದನ ರೆಡ್ಡಿ ಸ್ವಂತ ಪಕ್ಷ ಕಟ್ಟಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನಾಳೆ ಬೆಳಗ್ಗೆ ಬಿಜೆಪಿ ಕಚೇರಿಗೆ ಬರೋಕೆ ಹೇಳಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಸಮ್ಮುಖದಲ್ಲಿ ನಾಳೆ ಬಿಜೆಪಿ ಸೇರುತ್ತೇನೆ. ಲೋಕಸಭಾ ಚುನಾವಣೆಗೆ ನಿಲ್ಲುವ ವಿಚಾರ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿ ಆಗಬೇಕು. ನಾನು ಪಕ್ಷಕ್ಕೆ ಸೇರ್ಪಡೆಯಾಗಿ ಪಕ್ಷಕ್ಕೆ ದುಡಿಯುತ್ತೇನೆ ಎಂದು ಹೇಳಿದ್ದಾರೆ.