ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

Prasthutha|

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಸೆ. 25ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

- Advertisement -

ಸಚಿವ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಬೆಳಗ್ಗೆ 10ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಮತ್ತು ಸಚಿವೆ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌ ನೇತೃತ್ವದಲ್ಲಿ ಬೆಳಗ್ಗೆ 10.30ರಿಂದ ಮಣಿಪಾಲದ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಆಯಾಯ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳಬಹುದು ಎಂದು ಉಭಯ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್‌ ಎಂ.ಪಿ. ಮತ್ತು ಡಾ| ವಿದ್ಯಾ ಕುಮಾರಿ ಕೆ. ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Join Whatsapp