ಮುಸ್ಲಿಮ್ ವಿರೋಧಿ ಘೋಷಣೆ: ಸುದರ್ಶನ ವಾಹಿನಿ ಅಧ್ಯಕ್ಷರಿಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

Prasthutha|

ನವದೆಹಲಿ: ಮುಸ್ಲಿಮ್ ವಿರೋಧಿ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸುದರ್ಶನ ವಾಹಿನಿಯ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಶರ್ಮಾನಿಗೆ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.

- Advertisement -

ದೆಹಲಿಯ ಜಂತರ್ ಮಂತರ್ ನಲ್ಲಿ ಹಿಂದುತ್ವವಾದಿಗಳು ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಹೆಚ್ಚುವರಿ ನ್ಯಾಯಾಧೀಶ ಅನಿಲ್ ಆಂಟಿಲ್ ಅವರು ಶರ್ಮಾ ಅವರಿಗೆ ಜಾಮೀನು ನಿರಾಕರಿಸಿ ಆದೇಶ ನೀಡಿದ್ದಾರೆ.
ಜಂತರ್ ಜಂತರ್ ನಲ್ಲಿ ಕಾರ್ಯಕ್ರಮದ ಪ್ರಮುಖ ಆಯೋಜಕರಾಗಿರುವ ಶರ್ಮಾ, ಕಾರ್ಯಕ್ರಮಕ್ಕೆ ಬೇಕಾದ ಬ್ಯಾನರ್, ಪೋಸ್ಟರ್ ಸಹಿತ ಹಲವಾರು ದಾಖಲೆಗಳನ್ನು ಮುದ್ರಿಸಿ ದೆಹಲಿಯ ವಿವಿಧ ಕಡೆಯಲ್ಲಿ ಹಂಚಿದ್ದ. ಆ ದಾಖಲೆಯಲ್ಲಿ ಶರ್ಮಾ ತನ್ನ ಮೊಬೈಲ್ ಸಂಖ್ಯೆ ಮತ್ತು ಫೋಟೊಗಳನ್ನು ಮುದ್ರಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದನು.

- Advertisement -

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆತನ ವಿರುದ್ಧ 153 ಎ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಆರೋಪಿ ಪರ ವಕೀಲರಾದ ರಜತ್ ಅನೇಜಾ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ಕೆ. ಕೈನ್ ಆರೋಪಿ ಶರ್ಮಾ ಹನುಮಾನ್ ಚಾಲಿಸ್ ಪಠಣಗಳ ಜೊತೆಗೆ ಮುಸ್ಲಿಮ್ ವಿರೋಧಿ ಘೋಷಣೆ ಕೂಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆತನ ಜಾಮೀನು ಅರ್ಜಿಯನ್ನು ತಳ್ಳಿದೆ.

Join Whatsapp