ಜಪಾನ್: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ

Prasthutha|

ಟೋಕಿಯೋ: ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

- Advertisement -

ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ.

ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

- Advertisement -

Join Whatsapp