ಜಪಾನ್ ಭೂಕಂಪ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

Prasthutha|

ಟೋಕಿಯೊ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ 24 ಜನ ಸಾವನ್ನಪ್ಪಿದ್ದಾರೆ.

- Advertisement -

ಮಧ್ಯ ಜಪಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿ 24 ಜನ ಸಾವನ್ನಪ್ಪಿದ್ದಾರೆ.

ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಲ್ಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಸಂಭವಿಸಿದ ಭೂಕಂಪದಿಂದ ಸುನಾಮಿ ಉಂಟಾಗುವ ಭೀತಿ ಇತ್ತು. ಆದರೆ, ಸುನಾಮಿ ಉಂಟಾಗುವುದಿಲ್ಲ, ದೊಡ್ಡ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join Whatsapp