ಟೊಕಿಯೋ: ಜಪಾನ್ ನ ಫುಕುಶಿಮಾ ಕರಾವಳಿಯಲ್ಲಿ ನಿನ್ನೆ ರಾತ್ರಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇದುವರಿಗೆ ವಿದ್ಯುತ್ ತಗುಲಿ ನಾಲ್ಕು ಜನರು ಸಾವನ್ನಪ್ಪಿದ್ದು, 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ, ಭೂಕಂಪದ ಸಮಯದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರ ಸಾವಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. 97 ಜನ ಗಾಯಗೊಂಡಿದ್ದಾರೆ ಎಂದು ಹೇಳಿದರು.