ಭೂಕಂಪಕ್ಕೆ ಜಪಾನ್ ತತ್ತರ: ನಾಲ್ವರು ಸಾವು, 90ಕ್ಕೂ ಹೆಚ್ಚು ಜನರಿಗೆ ಗಾಯ

Prasthutha|

ಟೊಕಿಯೋ: ಜಪಾನ್ ನ ಫುಕುಶಿಮಾ ಕರಾವಳಿಯಲ್ಲಿ ನಿನ್ನೆ ರಾತ್ರಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇದುವರಿಗೆ ವಿದ್ಯುತ್ ತಗುಲಿ ನಾಲ್ಕು ಜನರು ಸಾವನ್ನಪ್ಪಿದ್ದು, 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

 ಇಂದು ಬೆಳಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ, ಭೂಕಂಪದ ಸಮಯದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಅವರ ಸಾವಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. 97 ಜನ ಗಾಯಗೊಂಡಿದ್ದಾರೆ ಎಂದು ಹೇಳಿದರು.

Join Whatsapp