ಜಪ್ಪಿನಮೊಗರು | ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ: ಹಲವು ವಾಹನಗಳು ಭಸ್ಮ

Prasthutha|

- Advertisement -

ಮಂಗಳೂರು: ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡವಾಗಿ ಹಲವು ವಾಹನಗಳು ಭಸ್ಮವಾಗಿರುವ ಘಟನೆ‌ ಜಪ್ಪಿನಮೊಗರು ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ.

- Advertisement -

ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಆಗಮಿಸಿ ಬೆಂಕಿ ಆರಿಸಲು ಹರಸಾಹಸಪಟ್ಟಿದ್ದಾರೆ.

Join Whatsapp