ಜಾರಕಿಹೊಳಿ ​ರಾಸಲೀಲೆ | ದೂರುದಾರನಿಗೆ ಬೆದರಿಕೆ!

Prasthutha: March 3, 2021

ರಾಮನಗರ: ಸಚಿವ ರಮೇಶ್​ ಜಾರಕಿಹೊಳಿಯ ರಾಸಲೀಲೆಯ ವೀಡಿಯೋ ರಿಲೀಸ್​ ಮಾಡಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ತನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.

“ಪ್ರಕರಣ ಬೆಳಕಿಗೆ ಬಂದ ಮೇಲೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿವೆ. ಇಂತಹ ಬೆದರಿಕೆಗೆ ಹೆದರುವುದಿಲ್ಲ. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ಕೊಡುತ್ತೇನೆ. ನನ್ನ ಜತೆ ಯಾವ ಪ್ರಭಾವಿ ವ್ಯಕ್ತಿಗಳೂ ನಿಂತಿಲ್ಲ” ಎಂದಿದ್ದಾರೆ.

ಸಂತ್ರಸ್ತ ಯುವತಿಯ ಕುಟುಂಬಸ್ಥರು ಪರಿಚಯಸ್ಥರ ಮೂಲಕ ನನ್ನನ್ನು ಭೇಟಿ ಮಾಡಿದ್ದಾರೆ. ಸಚಿವರಿಂದ ಸಂತ್ರಸ್ತ ಯುವತಿಗೆ ಅನ್ಯಾಯವಾಗಿದೆ. ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನೀವು ಮುಂದೆ ನಿಂತು‌ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ. ನಂತರ ಸಂಪೂರ್ಣವಾಗಿ ಪರಾಮರ್ಶೆ ಮಾಡಿ ವಕೀಲರ ಜತೆ ಚರ್ಚಿಸಿದ ಬಳಿಕ ಪೊಲೀಸ್ ಆಯುಕ್ತರನ್ನು ನಿನ್ನೆ ಭೇಟಿ ಮಾಡಿ ದೂರು ಕೊಟ್ಟಿದ್ದೇನೆ ಎಂದರು.

ದೂರಿನ ಜತೆಗೆ ಸಂಬಂಧಟ್ಟ ಮಾಹಿತಿಯನ್ನು ಕೊಟ್ಟಿದ್ದೇನೆ. ನಕಲಿ‌ ಸಿಡಿ‌ ಎಂಬ ಮಾತೂ ಕೇಳಿಬರುತ್ತಿರುವುದರಿಂದ ಆದಷ್ಟು ಬೇಗ ಈ ಬಗ್ಗೆ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಬರಲಿ ಎಂದರು. ಪ್ರಧಾನಿಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ಕೋರುತ್ತೇನೆ ಎಂದರು. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗೋವರೆಗೂ ಹೋರಾಟ ಮಾಡುತ್ತೇನೆ. ನನ್ನಜತೆ ಯಾವ ಪ್ರಭಾವಿಗಳೂ ಇಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!