ಜಾರಕಿಹೊಳಿ ಸೆಕ್ಸ್ ಹಗರಣ | ಸಂತ್ರಸ್ತ ಯುವತಿಗೆ ನೋಟಿಸ್

Prasthutha|

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಹಗರಣಕ್ಕೆ ಸಂಬಂಧಿಸಿ ನಿನ್ನೆ ವಿಡಿಯೋ ಬಿಡುಗಡೆ ಮಾಡಿದ್ದ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇರುವುದರಿಂದ ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು.

ಈಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp