ಜಾರಕಿಹೊಳಿ ಸಿಡಿ ಪ್ರಕರಣ; ಆರೋಪಿಗೆ ವಿಶ್ರಾಂತಿ. ಸಂತ್ರಸ್ತೆ ಯುವತಿಗೆ ಸತತ ವಿಚಾರಣೆಗೆ ಕಾಂಗ್ರೆಸ್ ಆಕ್ಷೇಪ

Prasthutha: April 5, 2021

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸತತವಾಗಿ ಸಂತ್ರಸ್ತೆ ಯುವತಿಯವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಆರೋಪಿಗೆ ಮಾತ್ರ ವಿಶ್ರಾಂತಿ ಪಡೆಯಲು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ‘ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣದಿಂದ ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯುತ್ತದೆ. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ ನೀಡುತ್ತಿದೆ’ ಎಂದು ಹೇಳಿದ್ದು, ಆರೋಪಿಯನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದೆ ಎಂದು ಪರೋಕ್ಷವಾಗಿ ಹೇಳಿದೆ.

‘ಸಿ.ಡಿ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ಪೊಲೀಸರೂ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್‌ ಅನ್ನು ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ’ ಎಂದು ಕಾಂಗ್ರೆಸ್‌ ಟೀಕಿಸಿದೆ.

‘ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ ಮೂಲಕ ಪೊಲೀಸರು ಕಳಿಸಿಕೊಡುತ್ತಾರೆ. ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಮಾಡುವ ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ’ ಎಂದು ಕಾಂಗ್ರೆಸ್‌ ಆರೋಪಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!