ಕಾರ್ಯಕರ್ತರ ಪುಂಡಾಟಿಕೆಯನ್ನು ರಾಹುಲ್ ಗಾಂಧಿ ಖಂಡಿಸದಿರುವುದು ಖೇದಕರ: ಕಪಿಲ್ ಬೆಂಬಲಕ್ಕೆ ನಿಂತ ಜಾವೇದ್

Prasthutha|

ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ನಿವಾಸದ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾರಿಗೆ ಹಾನಿ ಮಾಡಿರುವುದು ಖಂಡನೀಯ ಎಂದು ಸಾಹಿತಿ ಜಾವೇದ್ ಅಖ್ತರ್ ಪ್ರತಿಕ್ರಿಯಿಸಿದ್ದಾರೆ.

- Advertisement -

ಮಾತ್ರವಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ ಪಕ್ಷದ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸದಿರುವುದು ಖೇದಕರ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯನಿರ್ವಹಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ಕಪಿಲ್ ಸಿಬಲ್ ಅವರ ನಿವಾಸಕ್ಕೆ ದಾಳಿ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ವೆಂದು ಬಣ್ಣಿಸಿದ್ದಾರೆ. ಇದು ಮೋದಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗಿಂತ ವಿಭಿನ್ನವಾಗಿಲ್ಲ ಎಂದು ತಿಳಿಸಿದ್ದಾರೆ.

- Advertisement -

ಈ ಮಧ್ಯೆ ಹಿರಿಯ ನಾಯಕರಾದ ಗುಲಾಂ ನಬಿ ಆಝಾದ್, ಪಿ. ಚಿದಂಬರಂ, ಆನಂದ್ ಶರ್ಮಾ, ಭೂಪಿಂದರ್ ಸಿಂಗ್ ಹೂಡ, ವಿವೇಕ್ ತಂಖಾ ಮತ್ತು ರಾಜ್ ಬಬ್ಬರ್ ಸೇರಿದಂತೆ ಹಲವಾರು ನಾಯಕರು, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.

Join Whatsapp