ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಪ್ರಧಾನ ಕಾರ್ಯದರ್ಶಿಯಾಗಿ ಜಾವೆದ್ ಕಲ್ಲಡ್ಕ

Prasthutha|

ಜಿದ್ದಾ: ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜಾವಿದ್ ಮಿಯಾಂದಾದ್ ಕಲ್ಲಡ್ಕ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

 ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಅಧ್ಯಕ್ಷ ಡಾ.ಅರ್ಶಿ ಮಲಿಕ್ ನೇತೃತ್ವದಲ್ಲಿ ಜಿದ್ದಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.

ಜಾವೆದ್ ಹಲವು ಸಾಮಾಜಿಕ ಸಂಘಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಅವರು ಹಿದಾಯ ಫೌಂಡೇಶನ್ ಜಿದ್ದಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಮತ್ತು ಪ್ರಸ್ತುತ ಜಝಾ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.



Join Whatsapp