‘ಜವಾನ್’ ಚಿತ್ರದ ಪೋಸ್ಟರ್’ನಿಂದ ರಸ್ತೆ ಸುರಕ್ಷತೆ ಜಾಗೃತಿ

Prasthutha|

ನವದೆಹಲಿ: ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಜವಾನ್’ ಚಿತ್ರದ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ.

- Advertisement -

ಉತ್ತರ ಪ್ರದೇಶ ಪೊಲೀಸರು ‘ಜವಾನ್’ ಪೋಸ್ಟರ್ ಬಳಕೆ ಮಾಡಿಕೊಂಡಿದ್ದಾರೆ. ಶಾರುಖ್ ಖಾನ್ ತಲೆಗೆ ಬ್ಯಾಂಡೇಜ್ ಕಟ್ಟಿರುವ ಫೋಟೋ ಒಂದು ಕಡೆ ಇದ್ದರೆ ಮತ್ತೊಂದು ಕಡೆ ಹೆಲ್ಮೆಟ್ ಫೋಟೋ ಇದೆ. ‘ಈ ರೀತಿ ಬ್ಯಾಂಡೇಜ್ ಕಟ್ಟಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು ಎಂದರೆ ಹೆಲ್ಮೆಟ್ ಧರಿಸಿ’ ಎಂಬರ್ಥದಲ್ಲಿ ಉತ್ತರ ಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದಾರೆ.

ದೆಹಲಿ ಪೊಲೀಸ್ ಟ್ವಿಟರ್ ಖಾತೆಯಿಂದ ಪೋಸ್ಟ್ ಒಂದನ್ನು ಮಾಡಲಾಗಿದೆ. ಶಾರುಖ್ ಖಾನ್ ಮುಖಕ್ಕೆ ಬ್ಯಾಂಡೇಜ್ ಸುತ್ತಿರೋ ಫೋಟೋ ಇದರಲ್ಲಿದೆ. ‘ಸಣ್ಣವರಾಗಿರಲಿ, ಯುವಕರಾಗಿರಲಿ ಅಥವಾ ದೊಡ್ಡವರೇ ಆಗಿರಲಿ ಹೆಲ್ಮೆಟ್ ಜೀವ ಉಳಿಸುತ್ತದೆ’ ಎಂದು ಬರೆಯಲಾಗಿದೆ. ಈ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

- Advertisement -

Join Whatsapp