Home ಟಾಪ್ ಸುದ್ದಿಗಳು ಸತತ ಮೂರನೇ ಬಾರಿ ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ

ಸತತ ಮೂರನೇ ಬಾರಿ ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ

ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ( ಎಸಿಸಿ) ಅಧ್ಯಕ್ಷರಾಗಿ ಜಯ್ ಶಾ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.


ಇಂಡೋನೇಷ್ಯಾದ ಬಾಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಮೂಲಕ ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ಈ ಸಭೆಯಲ್ಲಿ ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಜಯ್ ಶಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು.

Join Whatsapp
Exit mobile version