ICC ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್ ಶಾ

Prasthutha|

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಗ್ರೆಗ್ ಬರ್ಕ್ಲೆ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಆ ಸ್ಥಾನಕ್ಕೆ ಈಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೆಸರು ಮುಂಚೂಣಿಯಲ್ಲಿದೆ.

- Advertisement -


ಗ್ರೆಗ್ ಬಾರ್ಕ್ಲೇ ಅವರನ್ನು ನವೆಂಬರ್ 2020 ರಲ್ಲಿ ಅವಿರೋಧವಾಗಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2022ರಲ್ಲಿ ಅವರು ಮರು ಚುನಾಯಿತರಾಗಿದ್ದರು. ಇದೀಗ ಮೂರನೇ ಬಾರಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಂಡಳಿಗೆ ದೃಢಪಡಿಸಿದ್ದಾರೆ. ಅದರಂತೆ ಈ ಬಾರಿಯ ಐಸಿಸಿ ಚುನಾವಣೆಯ ಮೂಲಕ ಹೊಸ ಅಧ್ಯಕ್ಷರ ನೇಮಕವಾಗಲಿದೆ. ಇನ್ನು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 27. ಇದರೊಳಗೆ ಜಯ್ ಶಾ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.


ಅಧ್ಯಕ್ಷರ ಆಯ್ಕೆಯು ಸಾಮಾನ್ಯವಾಗಿ 16 ಮತಗಳನ್ನು ಹೊಂದಿರುತ್ತದೆ. ವಿಜೇತರನ್ನು ನಿರ್ಧರಿಸಲು, ಒಂಬತ್ತು ಮತಗಳ ಬಹುಮತದ ಅಗತ್ಯವಿದೆ (51%). ಈ ಹಿಂದೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡವರಿಗೆ ಮೂರನೇ ಎರಡರಷ್ಟು ಬಹುಮತವಿತ್ತು. ಇದೀಗ ಇತರೆ ಕ್ರಿಕೆಟ್ ಮಂಡಳಿಗಳ ಬೆಂಬಲದೊಂದಿಗೆ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ನ ಪ್ರಧಾನ ಹುದ್ದೆಗೇರಲಿದ್ದಾರಾ ಕಾದು ನೋಡಬೇಕಿದೆ.

- Advertisement -


ಒಂದು ವೇಳೆ ಜಯ್ ಶಾ ಅಧ್ಯಕ್ಷ ಸ್ಥಾನಕ್ಕೇರಿದರೆ, ಐಸಿಸಿಯ ಮುಖ್ಯಸ್ಥರಾದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಳ್ಳಲಿದ್ದಾರೆ.



Join Whatsapp