Home ಟಾಪ್ ಸುದ್ದಿಗಳು ಜಯದೇವ ಆಸ್ಪತ್ರೆ ನಿರ್ದೇಶಕರ ಸೇವಾವಧಿ ಒಂದು ವರ್ಷ ವಿಸ್ತರಣೆ

ಜಯದೇವ ಆಸ್ಪತ್ರೆ ನಿರ್ದೇಶಕರ ಸೇವಾವಧಿ ಒಂದು ವರ್ಷ ವಿಸ್ತರಣೆ

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಣೆ ಮಾಡಲಾಗಿದೆ.


ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ 2005ರಿಂದಲೂ ಅಧಿಕಾರದಲ್ಲಿದ್ದಾರೆ. ಇದೀಗ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದ್ದು, ನಾಳೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.


ಡಾ. ಸಿ. ಎನ್. ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ, ಸೇವಾವಧಿ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಕರೆ ಮಾಡಿ ತಿಳಿಸಿದ್ದು, ಈ ಕುರಿತು ಅಧಿಕೃತ ಆದೇಶ ಬಾಕಿ ಇದೆ ಎಂದು ತಿಳಿದುಬಂದಿದೆ.

Join Whatsapp
Exit mobile version