Home ಟಾಪ್ ಸುದ್ದಿಗಳು ಜಯಲಲಿತಾ ಚಿನ್ನಾಭರಣ ಹಸ್ತಾಂತರಕ್ಕೆ ದಿನ ನಿಗದಿ

ಜಯಲಲಿತಾ ಚಿನ್ನಾಭರಣ ಹಸ್ತಾಂತರಕ್ಕೆ ದಿನ ನಿಗದಿ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಹಾಗೂ ಇತರರಿಂದ ಜಪ್ತಿ ಮಾಡಿದ್ದ ಚಿನ್ನಾಭರಣವನ್ನು ತಮಿಳುನಾಡಿನ ಸರ್ಕಾರಕ್ಕೆ ಹಸ್ತಾಂತರಿಸಲು ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ.


ಟಿ. ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಮಾರ್ಚ್ 6 ಹಾಗೂ 7ರಂದು ಚಿನ್ನಾಭರಣ ಹಸ್ತಾಂತರ ಮಾಡಲಾಗುವುದು. ಚಿನ್ನಾಭರಣ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ತಮಿಳುನಾಡು ಸರ್ಕಾರ ನೇಮಿಸಬೇಕು’ ಎಂದು ಆದೇಶಿಸಿದ್ದಾರೆ.


ಛಾಯಾಗ್ರಾಹಕರು ಹಾಗೂ ವಿಡಿಯೊಗ್ರಾಫರ್ಗಳನ್ನು ಕರೆತರಬೇಕು. ಜೊತೆಗೆ, ಚಿನ್ನಾಭರಣ ತುಂಬಿಕೊಳ್ಳಲು ಆರು ದೊಡ್ಡ ಗಾತ್ರದ ಟ್ರಂಕ್ಗಳನ್ನು ತರಬೇಕು’ ಎಂದು ಆದೇಶದಲ್ಲಿ ಹೇಳಿದ್ದಾರೆ.

Join Whatsapp
Exit mobile version