Home ಟಾಪ್ ಸುದ್ದಿಗಳು ಜಯಲಲಿತಾ ಗಳಿಸಿದ್ದ ವಸ್ತುಗಳು ತಮಿಳುನಾಡಿಗೆ: ಕರ್ನಾಟಕಕ್ಕೆ 5 ಕೋಟಿ ರೂ. ನೀಡಲು ಆದೇಶ

ಜಯಲಲಿತಾ ಗಳಿಸಿದ್ದ ವಸ್ತುಗಳು ತಮಿಳುನಾಡಿಗೆ: ಕರ್ನಾಟಕಕ್ಕೆ 5 ಕೋಟಿ ರೂ. ನೀಡಲು ಆದೇಶ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ವಸ್ತುಗಳಿಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ.

ಖಜಾನೆಯಲ್ಲಿ ಕೊಳೆಯುತ್ತಿರುವ ಆ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರ್ಟಿಐ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಿದೆ.


ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ ₹5 ಕೋಟಿ ಮೊತ್ತವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆಯೂ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.

Join Whatsapp
Exit mobile version