ಜಯನಗರ ಕ್ಷೇತ್ರಕ್ಕೆ ಅನುದಾನ ಕಡಿತ: ಶಾಸಕಿ ಸೌಮ್ಯರೆಡ್ಡಿ ನೇತೃತ್ವದಲ್ಲಿ ಮೌನ ಪ್ರತಿಭಟನೆ

Prasthutha|

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ  ಅನುದಾನವನ್ನು ಕಡಿತ ಮಾಡಿರುವುದನ್ನು ಖಂಡಿಸಿ ಜಯನಗರ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಶಾಸಕಿ  ಸೌಮ್ಯರೆಡ್ಡಿ  ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ನಡೆಸಲಾಯಿತು.

- Advertisement -

ಶಾಸಕಿ ಸೌಮ್ಯ ರೆಡ್ಡಿ ಮಾತನಾಡಿ, 2019-20ನೇ ಸಾಲಿನ ಆಯವ್ಯಯದಲ್ಲಿ ಕಾಂಗ್ರೆಸ್ ಸರ್ಕಾರದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯನಗರ ಕ್ಷೇತ್ರಕ್ಕೆ ರೂ.150 ಕೋಟಿ ಅನುದಾನ ಮೀಸಲಿಟ್ಟಿದ್ದರು. ಜಯನಗರ ವಾಣಿಜ್ಯ ಸಂಕೀರ್ಣದ ಕಾಮಗಾರಿಗೆ ರೂ.60 ಕೋಟಿ ಹಾಗೂ ವಿವಿಧ ಕಾಮಗಾರಿಗಳಿಗೆ ರೂ.90 ಕೋಟಿ ಅನುದಾನ ಮೀಸಲಿಡಲಾಗಿತ್ತು. ಈಗ ರಾಜ್ಯ ಬಿ.ಜೆ.ಪಿ. ಸರ್ಕಾರ ಹಾಗೂ ಬಿ.ಬಿ.ಎಂ.ಪಿ.ಯು ಈ ಅನುದಾನವನ್ನು ಬಿ.ಜೆ.ಪಿ. ಶಾಸಕರಿರುವ ಕ್ಷೇತ್ರಕ್ಕೆ ನೀಡಿದ್ದಾರೆ. ಈ ಮೂಲಕ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್, ಮಾಜಿ.ಬಿ.ಬಿ. ಎಂ ಪಿ ಸದಸ್ಯರಾದ  ಎನ್. ನಾಗರಾಜು ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮೌನ ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು.

Join Whatsapp