ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಆಗಿ ಪೂರ್ಣಿಮಾ ಆಯ್ಕೆ

Prasthutha|

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

- Advertisement -

ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ  ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು.

- Advertisement -

ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.

ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು.

 ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು‌ ಭಾಗವಹಿಸಿದ್ದರು.

ಉಪ ಮೇಯರ್ ಪೂರ್ಣಿಮ


Join Whatsapp